ಬೆಂಗಳೂರು: ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದರು
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ. ವಿಶೇಷ ಅಧಿವೇಶನ ನಡೆಸಲು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ.22ರಿಂದ ನಡೆಯಲಿರುವಂತ ವಿಶೇಷ ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ ಇದೆ. ವಿಬಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.








