ಬೆಂಗಳೂರು : ಬೆಂಗಳೂರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ಸಂಭವಿಸಿದೆ.
ಹೌದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಮಾತ್ರೆ ಸೇವಿಸಿ ಪವಿತ್ರ ಬಾಯಿ (26) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿರುವ ಪವಿತ್ರಬಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ದೀರ್ಘವಾದ ಬರೆದಿಟ್ಟು ಪವಿತ್ರ ಬಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ತಿರಿಗೆ ದೊಡ್ಡಿ ಗ್ರಾಮದ ಅರುಣ್ ನಾಯಕ್ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಕನಕಪುರದ ತಾಲೂಕಿನ ತಿರಿಗೆ ದೊಡ್ಡಿ ಗ್ರಾಮದ ಅರುಣ ನಾಯಕ್ ಪ್ರೀತಿ ಹೆಸರಲ್ಲಿ ದಹಿಕ ಸಂಪರ್ಕ ಬೆಳೆಸಿ ವಿವಾಹಕ್ಕೆ ಹಿಂದೇಟು ಹಾಕಿದ್ದಾನೆ. ಕಳೆದ ಎರಡು ತಿಂಗಳ ಹಿಂದೆ ರಾಜಿ ಸಂಧಾನ ನಡೆಸಲಾಗಿತ್ತು. ಆದರೆ ಯುವತಿಗೆ ಅರುಣ ನಾಯಕ್ ಸ್ಪಂದಿಸದ ಹಿನ್ನೆಲೆಯಲ್ಲಿ ಮಾತ್ರೆ ಸೇವಿಸಿ ಪವಿತ್ರ ಬಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.








