ಬೆಳಗಾವಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾದಯಾತ್ರೆ ವಿಚಾರವಾಗಿ ಬಿಜೆಪಿ ನಾಯಕರಲ್ಲಿ ಗೊಂದಲ ಇದೆ. ಈ ವಿಚಾರವಾಗಿ ಮಾಜಿ ಸಚಿವ ಬಿ ಶ್ರೀರಾಮಲು ಹೇಳಿಕೆಯನ್ನು ನಾನು ಗಮನಿಸಿದ್ದೇನೆ . ಪಾದಯಾತ್ರೆಗೆ ನನ್ನ ವೈಯಕ್ತಿಕ ವಿರೋಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಪಾದಯಾತ್ರೆ ಮಾಡಿದಾಗ ಗೊಂದಲ ಸೃಷ್ಟಿಯಾಗಿತ್ತು. ಈಗ ಆ ರೀತಿಯ ಗೊಂದಲಕ್ಕೆ ಅವಕಾಶ ಕೊಡಬಾರದು. ಏನೇ ನಿರ್ಧಾರ ತೆಗೆದುಕೊಂಡರು ಕೇಂದ್ರದ ಗಮನಕ್ಕೆ ತರಬೇಕು ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಳಿಕ ಕೇಂದ್ರ ನಾಯಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಬೆಳಗಾವಿಯಲ್ಲಿ ವಿಜಯೇಂದ್ರ ಹೇಳಿಕೆ ನೀಡಿದರು.








