Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಭೇರಿ: ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ
KARNATAKA

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಭೇರಿ: ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಂಬೈಯಲ್ಲಿ ಅತಿ ದೊಡ್ಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷವು ಭಾರೀ ಮುನ್ನಡೆ ಸಾಧಿಸಿದೆ. ಇದು ಸಂತಸದ ವಿಚಾರ ಎಂದರು. ಕಾಂಗ್ರೆಸ್‍ನವರು ಮತಪತ್ರದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಾಗಿ ಹೇಳುತ್ತಿದ್ದರು. ಅದರಲ್ಲೂ ನಮ್ಮ ರಾಜ್ಯದಲ್ಲಿ ಸೋತಿದ್ದಾರೆ. ಈಗ ಮತ್ತೆ ಇವಿಎಂ ಹ್ಯಾಕ್ ಆಗಿದೆ ಎನ್ನಲಿದ್ದಾರೆ ಎಂದು ವ್ಯಂಗ್ಯವಾಡಿದರು. 30 ವರ್ಷಗಳ ನಂತರ ಬಿಜೆಪಿ ಮೇಯರ್ ಚುಕ್ಕಾಣಿ ಹಿಡಿಯುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು.

ಕೇರಳದ ತಿರುವನಂತಪುರದಲ್ಲೂ ನಾವು ಗೆದ್ದಿದ್ದೇವೆ. ನರೇಂದ್ರ ಮೋದಿ ಜೀ ಅವರು ಮಾಡುವ ಕೆಲಸ ಇದಕ್ಕೆ ಕಾರಣ; ಬಿಜೆಪಿಗೆ ಪರ್ಯಾಯ ಯಾವುದೂ ಇಲ್ಲವೆಂದು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಮುಂಬೈ ಜನತೆಯನ್ನು ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ, ನಾಯಕರನ್ನು ಅಭಿನಂದಿಸಿದರು.

ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಪ್ತಗಿರಿಗೌಡ ಅವರು ಮಾತನಾಡಿ, ರಾಷ್ಟ್ರದ ಅತ್ಯಂತ ಶ್ರೀಮಂತ ನಗರಪಾಲಿಕೆ ಬೃಹನ್ಮುಂಬೈಯಲ್ಲಿ ಬಿಜೆಪಿ ಮಿತ್ರಕೂಟ ಗೆದ್ದಿದೆ. ಮುಂಬೈ ಜನತೆ ನಿಜವಾದ ಶಿವಸೇನೆ ಯಾರೆಂದು ತೋರಿಸಿದ್ದಾರೆ ಎಂದು ತಿಳಿಸಿದರು. ಅಲ್ಲಿ ಶಿವಸೇನೆ ಹೆಸರಿನಲ್ಲಿ ಬಹಳ ಬೂಟಾಟಿಕೆ ನಡೆಯುತ್ತಿತ್ತು ಎಂದು ನುಡಿದರು.

ನಮ್ಮ ಮೇಲೆ ಠಾಕ್ರೆಯವರ ಕುಟುಂಬ ಮಾಡಿದ ಆರೋಪಗಳೆಲ್ಲವನ್ನೂ ಬದಿಗೊತ್ತಿ ನಿಜವಾದ ಶಿವಸೇನೆ ಯಾವುದು, ರಾಷ್ಟ್ರಕ್ಕೆ ಮುಂಚೂಣಿಯಲ್ಲಿ ಯಾರು ನಡೆಸಿಕೊಂಡು ಹೋಗಬೇಕೆಂದು ಜನ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು. ಇದು ಪ್ರಜಾಪ್ರಭುತ್ವದ ನೈಜ ಗೆಲುವು ಎಂದು ವಿಶ್ಲೇಷಿಸಿದರು. ಕಾರ್ಯಕರ್ತರು ಮತ್ತು ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಬಿಜೆಪಿ ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಅವರು ಮಾತನಾಡಿ, ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ದ್ವೇಷಪೂರಿತ ಪ್ರಚಾರ ಮಾಡಿದ್ದರು. ಮುಂಬೈನ ಪ್ರಬುದ್ಧ ಮತದಾರರು ಅವರಿಬ್ಬರಿಗೂ ಕಪಾಳಮೋಕ್ಷ ಮಾಡಿ, ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು.

ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್, ಬೆಂಗಳೂರು ಉತ್ತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಭಾನು ರಂಗಸ್ವಾಮಿ, ಪ್ರಮುಖರಾದ ಗಂಗಹನುಮಯ್ಯ, ಮುಖಂಡರು, ಪಾಲಿಕೆಯ ಮಾಜಿ ಸದಸ್ಯರು, ಕಾರ್ಯಕರ್ತರು ಇದ್ದರು.

BREAKING: ವಿಜಯಪುರದಲ್ಲಿ ‘GPS ಟ್ರ‍್ಯಾಕರ್’ ಹಾಗೂ ಕ್ಯಾಮರಾ ಹೊಂದಿದ್ದ ರಣಹದ್ದು ಪತ್ತೆ

SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!

Share. Facebook Twitter LinkedIn WhatsApp Email

Related Posts

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

1 Min Read

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

1 Min Read
Recent News

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

Vijay 5

BREAKING : ತಮಿಳುನಾಡಿನಲ್ಲಿ ಇನ್ಮುಂದೆ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಮಹತ್ವದ ಆದೇಶ

State News
KARNATAKA

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ…

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.