ಬೆಂಗಳೂರು : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇಂದು ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ ತೆರಳಬೇಕಿತ್ತು.
ಆದರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು. ಬಳಿಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಕರ್ನಾಟಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಜಾರಿಕೊಂಡರು.








