ಬೆಂಗಳೂರು : ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ (ವಾಟರ್ ಬೆಲ್) ಬಾರಿಸುವುದನ್ನು ಕಡ್ಡಾಯಗೊಳಿಸಿ, ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಆರೋಗ್ಯ, ಬೆಳವಣಿಗೆ ದೃಷ್ಟಿಯಿಂದ ಮಕ್ಕಳು ನಿತ್ಯವೂ ನಿಗದಿತ ಪ್ರಮಾಣದಲ್ಲಿ ನೀರು ಕುಡಿಯಬೇಕು. ಆದರೆ, ಮಕ್ಕಳಿಗೆ ಈ ಕುರಿತು ಸೂಕ್ತ ಅರಿವು ಇರುವುದಿಲ್ಲ. ಅದಕ್ಕಾಗಿ ಶಾಲಾ ಅವಧಿಯಲ್ಲಿ ಮಕ್ಕಳು ನಿಯಮಿತವಾಗಿ ನೀರು ಕುಡಿಯುವುದನ್ನು ನೆನಪಿಸಬೇಕಾದುದು ಶಿಕ್ಷಕರು ಮತ್ತು ಸಿಬ್ಬಂದಿಯ ಜವಾಬ್ದಾರಿಯೂ ಆಗಿದೆ.
ಮಧ್ಯಾಹ್ನದ ಬಿಸಿಯೂಟ, ಆಟದ ಸಮಯದಲ್ಲಿ ನೀರು ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಎಲ್‌ಕೆಜಿ, ಯುಕೆಜಿ ಒಳಗೊಂಡಂತೆ ಎಲ್ಲ ಹಂತದಲ್ಲೂ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಈ ನಿಯಮ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.








