ಬೆಂಗಳೂರು: 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 31 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ. 31 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭರತ್ ರೆಡ್ಡಿಗೆ ಜನಾರ್ಥನ ರೆಡ್ಡಿ ಮನೆ ಸುಟ್ಟು ಹಾಕುವಷ್ಟು ತಾಕತ್ತಿದೆಯೇ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ








