ಬೆಂಗಳೂರು: ನಗರದಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 4353 ಪ್ರಯಾಣಿಕರಿಂದ ಬರೋಬ್ಬರಿ 8.08 ಲಕ್ಷ ದಂಡವನ್ನು ವಸೂಲಿ ಮಾಡಿ, ಬಿಸಿ ಮುಟ್ಟಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿAದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿ 4207 ಪ್ರಕರಣಗಳನ್ನು ಪತ್ತೆಹಚ್ಚಿ, 4353 ಟಿಕೇಟ್ ರಹಿತ ಪ್ರಯಾಣಿಕರಿಂದ 8,08,704/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.
BREAKING: ಬೆಂಗಳೂರಲ್ಲಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿ ಲೋಕಾಯುಕ್ತ ಪೊಲೀಸರು ಅರೆಸ್ಟ್








