ಬೆಂಗಳೂರು : ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪೊಲೀಸರ ನಿರಂತರ ಕಾರ್ಯಾಚರಣೆ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್ ಚಟುವಟಿಕೆಗಳು ಯಥೇಚ್ಛವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಅಲ್ಲದೇ, ಸೈಬರ್ ಕ್ರೈಂ ಹಾವಳಿಯು ಹೆಚ್ಚಾಗುತ್ತಿದೆ. ಅಮಾಯಕರು ಪ್ರತಿದಿನ ಲಕ್ಷಾಂತರ ರೂ. ಹಣ ಕಳೆದುಕೊಳ್ಳುತ್ತಿದ್ದಾರೆ.
ಸೈಬರ್ ಕ್ರೈಂ ಹಾವಳಿ ಮತ್ರು ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಪ್ರತ್ಯೇಕ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರೀಕ್ಷೆಯ ಮಟ್ಟಕ್ಕೆ ಕೆಲಸ ಮಾಡುತ್ತಿಲ್ಲ. ಇದನ್ನು ನಿರ್ಲಕ್ಷಿಸದೇ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಬೆಂಗಳೂರು ನಗರವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಬೆಂಗಳೂರು ನಗರ ಸೈಬರ್ ಕ್ರೈಂ ಅಡ್ಡೆಯಾಗುವುದಕ್ಕೆ ಆಸ್ಪದ ನೀಡಬಾರದು. ಇತ್ತೀಚೆಗಿನ ಕೆಲವು ಸೈಬರ್ ಕ್ರೈಂ ಪ್ರಕರಣಗಳಲ್ಲಿ ಪ್ರಶಂಸನೀಯವಾಗಿ ಕೆಲಸ ಮಾಡಲಾಗಿದೆ. ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮತ್ತಷ್ಟು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಿರ್ಲಕ್ಷ್ಯಿಸಲಾಗುತ್ತಿದೆ. ಪ್ರಕರಣದ ತಪ್ಪಿತಸ್ಥರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದರೆ ಸಾಲುವುದಿಲ್ಲ. ತಪ್ಪಿತಸ್ಥರು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ನೊಂದವರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ಹೇಳಿದರು.
ಮರ್ಯಾದೆ ಹತ್ಯೆ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಕುಟುಂಬಸ್ಥರ ವಿರೋಧ ನಡುವೆಯೂ ಅಂತರ್ಜಾತಿ ವಿವಾಹವಾದಾಗ, ಪೊಲೀಸರು ಅಗತ್ಯ ರಕ್ಷಣೆ ನೀಡಬೇಕು. ಡಿಸಿಆರ್‌ಇ ಪೊಲೀಸ್ ಠಾಣೆಗಳು ಗಮನ ಹರಿಸಬೇಕಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನರ ನೋವನ್ನು ಆಲಿಸಬೇಕು ಎಂದು ತಿಳಿಸಿದರು.
BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ, ಐಪಿಎಲ್ ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್








