ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಗೆ (ನಗರಸಭೆ ಹಾಗೂ ಪುರಸಭೆ), ಒಟ್ಟು 03 ನಗರ ಸ್ಥಳೀಯ ಸಂಸ್ಥೆಗಳ ನಗರಸಭೆ ಹೆಬ್ಬಗೋಡಿ. ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆ ನಡೆಯಲಿದ್ದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಜನವರಿ 9 ರಿಂದ ಜನವರಿ 22 2026 ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಜನವರಿ 23 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 27 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾವಾಗಿರುತ್ತದೆ.
ಮತದಾನವು ಅಗತ್ಯವಾದಲ್ಲಿ ಫೆಬ್ರವರಿ 4 ರಂದು ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ವರೆಗೆ ನಡೆಯಲಿದೆ. ಅಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ರಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ. ಫೆಬ್ರವರಿ 5 ರಂದು ಚುನಾವಣೆಯು ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಚುನಾವಣಾ ಅಧಿಕಾರಿಗಳು ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಗರು ತಮ್ಮ ಪಾಂಡಿತ್ಯ ಪ್ರದರ್ಶಿಸುವ ಬರದಲ್ಲಿ ದುರಾಡಳಿತ ಜಗಜಾಹ್ಹೀರ: ಸಚಿವ ರಾಮಲಿಂಗಾರೆಡ್ಡಿ
ಭರತ್ ರೆಡ್ಡಿಗೆ ಜನಾರ್ಥನ ರೆಡ್ಡಿ ಮನೆ ಸುಟ್ಟು ಹಾಕುವಷ್ಟು ತಾಕತ್ತಿದೆಯೇ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ








