ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆಮಾಡಲಾಗುತ್ತಿದ್ದು, ಈತಾಣಗಳುಸರ್ಕಾರದನೇರಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ.
ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಎಕರೆ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂಬುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದರು.
ಫೆಬ್ರವರಿ ಅಂತ್ಯದಲ್ಲಿ ಈ ಪ್ರಕ್ರಿಯೆ ಪೂರ್ಣವಾಗಲಿದೆ. ತಿಂಗಳೊಳಗೆ ಪ್ರಸ್ತಾವನೆ ಕಳುಹಿಸಲು ಸೂಚನೆ ನೀಡಲಾಗಿದೆ. 6 ದೇವಸ್ಥಾನಗಳ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡಲಾಗಿದೆ. ಲಕ್ಕುಂಡಿಯಲ್ಲಿ ಹುದುಗಿರುವ ದೇಗುಲಗಳಲ್ಲಿ ಉತ್ಖನನಕ್ಕೂ ಕ್ರಮವಹಿಸಲಾಗುತ್ತಿದೆ. ಮಾರ್ಚ್ ನೊಳಗಾಗಿ ದೇವಸ್ಥಾನಗಳಲ್ಲಿ ಉತ್ಖನನ ಮಾಡಲಾಗುತ್ತದೆ ಎಂದರು.








