ಮೈಸೂರು : ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ “ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ” ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಎಂದರು.
ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಕೆಲಸ ಕೊಡುವ ಕಾಯ್ದೆ. ಅದು ಸಂವಿಧಾನದ ಹಕ್ಕು. ಮನರೇಗಾವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು ಹಾಕಲಾಗುತ್ತಿದೆ.
ಕುಪ್ಯಾ ಗ್ರಾಮದಲ್ಲಿ ಸುಮಾರು 323 ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 22/10/2024 ರಲ್ಲಿ 501 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ 9/8/2025 ರಂದು 1,108 ಕೋಟಿ ರೂ. ಗಳ ಕಾರ್ಯಕ್ರಮಗಳು ಮತ್ತು ಇಂದು ₹323 ಕೋಟಿ ಸೇರಿದಂತೆ ಒಟ್ಟು 1,932 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1,500ಕ್ಕೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಜಾರಿ ಮಾಡಲಾಗಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳು ಎರಡಕ್ಕೂ ಸಮಾನವಾಗಿ ವೆಚ್ಚ ಮಾಡಲಾಗಿದೆ.
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ ವರುಣಾದಲ್ಲಿ ₹1,932 ಕೋಟಿಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು.
ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು.
2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ… pic.twitter.com/1AZ9OAPuX9— Siddaramaiah (@siddaramaiah) January 18, 2026








