ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಲೇಜ್ ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ವಿವೇಕ ನಗರ ಮುಖ್ಯ ರಸ್ತೆಯಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ಬಳಿಕ ಕಾಲೇಜು ಬಸ್ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಿವೇಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








