ಕೋಲಾರ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ದುಷ್ಕರ್ಮಿಗಳು ದೇವಸ್ಥಾನದ ಪೂಜಾರಿಯನ್ನು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹರಳೇರಿ ಸಮೀಪ ದುಷ್ಕರ್ಮಿಗಳು ಪೂಜಾರಿಯನ್ನು ಕೊಲೆ ಮಾಡಿದ್ದಾರೆ. 45 ವರ್ಷದ ಅಂಜನಪ್ಪ ಅವರನ್ನು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿಯಾಗಿ ಅಂಜಿನಪ್ಪ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








