ಬೆಂಗಳೂರು : ಕನ್ನಡದ ಅತ್ಯುನ್ನತ ರಿಯಾಲಿಟಿ ಶೋ ಗಳಲ್ಲಿ ಒಂದಾಗಿದ್ದ ಬಿಗ್ ಬಾಸ್ ಸೀಸನ್ 12 ಕ್ಕೆ ನಿನ್ನೆ ತೆರೆ ಬಿದ್ದಿದೆ. ಇವಂದು ಫಿನಾಲೆಯಲ್ಲಿ ಗಿಲ್ಲಿ ನಟ ವಿಜೇತರಾಗಿ ಹೊರಹೊಮ್ಮಿದ್ದು ಬಿಗ್ ಬಾಸ್ ಕಪ್ ಜೊತೆಗೆ 50 ಲಕ್ಷ ರೂಪಾಯಿ ಬಹುಮಾನ ಕೂಡ ಗೆದ್ದಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಗಿಲ್ಲಿ ನಟ, ತುಂಬಾ ಖುಷಿ ಆಯ್ತು ನನಗೆ. ನಂಬೋಕೆ ಆಗ್ತಿಲ್ಲ. ಹೊರಗಡೆ ಬಂದ್ಮೇಲೆ ಇದೆಲ್ಲ ನಿಜನಾ ಅನ್ನಿಸ್ತಿದೆ. ಬಂದಿರೋ 50 ಲಕ್ಷದಲ್ಲಿ ಯಾವುದಾದ್ರೂ ಜಮೀನು ತಗೊಂಡು ವ್ಯವಸಾಯ ಏನಾದ್ರೂ ಮಾಡ್ಬೇಕು ಎಂದು ಆಶಯ ವ್ಯಕ್ತಪಡಿಸಿದರು. ದೊಡ್ಡಮ್ಮ ದೊಡ್ಡಮ್ಮ ದ್ವಾಸೆ ಕೊಡು ಹಾಡನ್ನ ಸ್ಕೂಲ್‌ಗೆ ಹೋಗುವಾಗ ಕಲಿತಿದ್ದು, ಅದು ಹಾಗೆ ಮನೇಲಿ ಹೇಳಿದ್ದು. ಆಮೇಲೆ ಇಷ್ಟು ಫೇಮಸ್ ಆಯ್ತು ಆ ಹಾಡು. ಮಕ್ಕಳಿಗೆಲ್ಲ ಇಷ್ಟ ಆಗಿದೆ ಅನ್ನೋದು ಆಚೆ ಬಂದ್ಮೇಲೆ ಗೊತ್ತಾಯ್ತು ಎಂದು ಖುಷಿ ವ್ಯಕ್ತಪಡಿಸಿದರು.
ಕಾವ್ಯ ಜೊತೆ ಮದುವೆ ಎಲ್ಲ ಏನೂ ಇಲ್ಲ. ಎಂಟ್ರಿ ಕೊಡುವಾಗ ಜಂಟಿಯಾಗಿ ನಾನು ಮತ್ತು ಕಾವ್ಯ ಹೋಗಿದ್ವಿ. ಆವಾಗ ಸುಮ್ನೆ ಹೇಳಿದ್ದು, ಅದೇ ಸಿಂಕ್ ಆಗೋಯ್ತು. ನಾವು 6 ಜನ ಫೈನಲಿಸ್ಟ್ ಇದ್ವಲ್ಲ. ನಮಗೆ ಎಷ್ಟು ಟೆನ್ಷನ್ ಆಗ್ತಿತ್ತು. ಟಾಪ್ 6ನಲ್ಲಿ ಇರೋರಲ್ಲಿ ಯಾರಾದರು ಒಬ್ಬರು ನನ್ನ ಪಕ್ಕ ನಿಲ್ತಾರೆ ಅಂತ ಮನಸ್ಸಿಗೆ ಅನ್ನಿಸಿತ್ತು. ಆದರೆ, ಊಹೆ ಮಾಡೋಕು ಆಗ್ತಿರಲಿಲ್ಲ ಏನಾಗುತ್ತೆ ಅಂತ ಎಂದು ಗೆಲುವಿನ ಕ್ಷಣವನ್ನು ನೆನೆದರು.








