ಬೆಂಗಳೂರು : ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಹೌದು, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪಿಯು ಕಾಲೇಜು ಕ್ಯಾಂಪಸ್ ನಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೂ ಮುಂದಾಗಿದೆ. ಪಿಯು ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಮೊಬೈಲ್ ಬಳಸದಂತೆ ಸೂಚನೆ ನೀಡುವ ಸಾಧ್ಯತೆ ಇದೆ.
ಪದವಿ ಪೂರ್ವ ಪರೀಕ್ಷೆ ಸಮಯದಲ್ಲಿ ಸ್ಮಾರ್ಟ್ ಫೋನ್ ಬಳಕೆಗೆ ಕಡಿವಾಣ ಹಾಕಲು ಇಲಾಖೆ ಚಿಂತನೆ ನಡೆಸಿದೆ. ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆ ಕೊಠಡಿಗಳಲ್ಲಿ ಶಿಕ್ಷಕರು ಸಿಬ್ಬಂದಿ, ಗಳು ಮೊಬೈಲ್ ಬಳಕೆ ನಿಷೇಧಿಸಲು ಮುಂದಾಗಿದೆ. ಜ.27ರಿದ 2ನೇ ಹಂತದ ರಾಜ್ಯ ಪಿಯು ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯ ಪರೀಕ್ಷೆಗೆ ಮತ್ತುಷ್ಟು ಕಠಿಣ ನಿಯಮ ಜಾರಿಗೆ ತರಲು ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.








