ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದರೆ, ಇತ್ತ ಜೆಡಿಎಸ್ ಪಕ್ಷದಲ್ಲೂ ಕೂಡ ಹಲವು ಬೆಳವಣಿಗೆಗಳು ನಡೆದಿವೆ.ನಾನು ಜೆಡಿಎಸ್ನಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದರು.
ನಾನು ಯಾವ ನಾಯಕರಿಗೂ ದ್ರೋಹ ಮಾಡಿಲ್ಲ. 5 ಬಾರಿ ಶಾಸಕನಾಗಿದ್ದೇನೆ, ಅದರಲ್ಲಿ 2 ಬಾರಿ ಹುಣಸೂರು ಹಾಗೂ 3 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇನೆ, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ. ಯಾರನ್ನೂ ಟೀಕೆ ಮಾಡಿಲ್ಲ, ನಾನು ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ಜೆಡಿಎಸ್ ಪಕ್ಷವನ್ನು ಕಟ್ಟಿರುವ ವಿಚಾರ ಹೆಚ್ ಡಿ ದೇವೇಗೌಡರು ಹಾಗೂ ಹೆಚ್ ಡಿ ಕುಮಾರಸ್ವಾಮಿಗೆ ಗೊತ್ತಿದೆ. ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ, ಮುಂದೆಯೂ ಜೆಡಿಎಸ್ನಲ್ಲಿಯೇ ಇರುತ್ತೇನೆ. ಜೊತೆಗೆ ಜೆಡಿಎಸ್ನಿಂದಲೇ ಸ್ಪರ್ಧಿಸುತ್ತೇನೆ. ಯಾರೂ ಆತಂಕಪಡುವ ಆವಶ್ಯಕತೆ ಇಲ್ಲ. ನನಗೂ ಆತಂಕವಿಲ್ಲ, ಕಾರ್ಯಕರ್ತರಿಗೂ ಇಲ್ಲ ಎಂದರು.







