ವಡೋದರ : ಉಮೆನ್ಸ್ ಪ್ರೀಮಿಯಂ ಲೀಗ್ ನಲ್ಲಿ ಆರ್‌ಸಿಬಿ ಈಗಾಗಲೇ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು ಅಲ್ಲದೆ, ನಿನ್ನೆ ವಡೋದರದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧ ಸತತ ಐದನೇ ಪಂದ್ಯ ಗೆಲುವು ಮೂಲಕ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ. ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.
ಹೌದು ನಿನ್ನೆ ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ.
ತವರು ನೆಲ ಆದುದ್ದರಿಂದ ಗುಜರಾತ್ ತಂಡದಿಂದ ಸಂಘಟಿತ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಆರ್‌ಸಿಬಿ ಮತ್ತೆ ಎರಡನೇ ಬಾರಿ ಗುಜರಾತ್ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ, ಏಕೆಂದರೆ ಮೊದಲ ಪಂದ್ಯದಲ್ಲಿ ಇದೆ ಗುಜರಾತ್ ತಂಡವನ್ನು ಸೋಲಿಸಿದ್ದು, ಅದರ ಸೇಡನ್ನು ಈ ಪಂದ್ಯದಲ್ಲಿ ತೀರಿಸಿಕೊಳ್ಳುತ್ತದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಆರ್‌ಸಿಬಿ ಸಾಂಘಿಕ ದಾಳಿಗೆ ತತ್ತರಿಸಿದ ಗುಜರಾತ್ ಬರೋಬ್ಬರಿ 61 ರನ್ಗಳಿಂದ ಸೋಲೊಪ್ಪಿಕೊಂಡಿತು.
ಗೆಲ್ಲಲು 179 ರನ್‌ಗಳ ಕಠಿಣ ಗುರಿಯನ್ನು ಪಡೆದ ಗುಜರಾತ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಸತತ 5 ಪಂದ್ಯಗಳನ್ನು ಜಯಿಸಿದ ಆರ್‌ಸಿಬಿ ಅಂಕಪಟ್ಟಿಯಲ್ಲಿ 10 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಈ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.








