ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿ ಷ್ಕರಣೆ(ಎಸ್ಐಆರ್)ಯ ಪೂರ್ವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ತಿಂಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುವ ಸಾಧ್ಯತೆಯಿದೆ.
ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ರಾಜ್ಯದಲ್ಲಿ ಎಸ್ಐಆರ್ಪೂರ್ವಭಾವಿ ಪ್ರಕ್ರಿಯೆಗೆ ಚುನಾವಣಾ ಆಯೋಗ ಕಳೆದ ಡಿಸೆಂಬರ್ ನಲ್ಲಿಯೇ ಚಾಲನೆ ನೀಡಿದೆ. ಕರ್ನಾಟಕದಲ್ಲಿ ಎಸ್ಐಆರ್ಗೆ ಪೂರ್ವಭಾವಿಯಾಗಿ 2002ರ ಮತ್ತು 2025ರ ಮತದಾರರ ಪಟ್ಟಿಯನ್ನು ಹೋಲಿಕೆ ಮಾಡಲಾಗುತ್ತಿದೆ. ರಾಜ್ಯದ 5.547 ಕೋಟಿ ಮತದಾರರ ಪೈಕಿ 3.05 ಕೋಟಿ ಮತದಾರರ ವಿವರಗಳು ತಾಳೆಯಾಗಿವೆ ಎಂದು ತಿಳಿದು ಬಂದಿದೆ.
ಈಎಸ್ಐಆರ್ಪೂರ್ವಭಾವಿಪ್ರಕ್ರಿಯೆಯ ಭಾಗವಾಗಿಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆಹೋಗಿಮತದಾರರ ವಿಳಾಸ ಪಟ್ಟಿ ಪರಿಶೀಲನೆ ನಡೆಸಲಿದ್ದಾರೆ. ಮೃತಪಟ್ಟವರು, ಬದಲಾದವರು. ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಹೊಂದಿರುವವರ ವಿವರವನ್ನು ಕಲೆ ಹಾಕುತ್ತಾರೆ. ಅರ್ಹ ದಾಖಲೆಗಳನ್ನು ಒದಗಿಸಿದವರು ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ. ಇದರಿಂದ ಅರ್ಹ ಮತದಾರರ ಸಂಖ್ಯೆ ಅಂದಾಜು ಸಿಗಲಿದೆ. ಈ ಮಾಸಾಂತ್ಯದ ವೇಳೆ ಎಸ್ಐಆರ್ ಪೂರ್ವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಸ್ ಐ ಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ ಎಂದರು.








