ಯಾದಗಿರಿ : ಯಾದಗಿರಿಯಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಬೆಳಗುಂದಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಬೇಳೆ ಬಾತ್ ಸೇವಿಸಿದ್ದರು.
ಊಟ ಮಾಡಿದ ಕೆಲ ಹೊತ್ತಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿ ಭೇದಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ವಿದ್ಯಾರ್ಥಿಗಳನ್ನು ಸೈದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








