ಮೈಸೂರು : ಮೈಸೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶಹಾಬಾಜ್ (26) ಎನ್ನುವ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಉದಯಗಿರಿ ಬಿಡಿ ಕಾಲೋನಿ ಬಳಿ ಈ ಒಂದು ಕೊಲೆ ನಡೆದಿದೆ.
ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಯಾಗಿ ಶಹಬಾಜ್ ಕೊಲೆಯಾಗಿದ್ದಾನೆ. ಜುಬೆರ್ ಎಂಬಾತ ತನ್ನ ಸ್ನೇಹಿತರ ಜೊತೆಗೆ ಸೇರಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಕೊಲೆಯ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








