ಬೆಂಗಳೂರು : ರಾಜ್ಯದ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲು ಸುಪ್ರೀಂಕೋರ್ಟ್ ಗೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ.
ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಸದರಿ ಆದೇಶವನ್ನು ಮರುಪರಿಶೀಲನೆ ನಡೆಸಿ ಶಿಕ್ಷಕರಿಗೆ TET ಪರೀಕ್ಷೆಯಿಂದ ವಿನಾಯಿತಿ ನೀಡಲು ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸುವ ಭರವಸೆ ನೀಡಿದ್ದರು.
ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಶಿಕ್ಷಕರ ಪರವಾಗಿ TET ಪರೀಕ್ಷೆಯಿಂದ ವಿನಾಯಿತಿ ಕೋರಿ ಪುನರ್‌ಪರಿಶೀಲನೆ ಮಾಡುವಂತೆ ಅರ್ಜಿಯನ್ನು ಸಲ್ಲಿಸಿದೆ.









