ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯಿಂದ ಯುವಕನೊಬ್ಬ ಸಾವನ್ನಪ್ಪಿದ ಹಿನ್ನಲೆಯಲ್ಲಿ, ನರ ಭಕ್ಷಕ ಚಿರತೆ ಸೆರೆ ಕಾರ್ಯಾಚರಣೆಗೆ ಅರಣ್ಯಾಧಿಕಾರಿಗಳು ಇಳಿದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅರಣ್ಯ ಇಲಾಖೆ ಆದೇಶಿಸಿದೆ.
ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಂತ ಭಕ್ತರ ಮೇಲೆ ಚಿರತೆ ದಾಳಿ ನಡೆಸಿತ್ತು. ಈ ದಾಳಿಯಿಂದಾಗಿ ಯುವಕ ಪ್ರವೀಣ್ ಎಂಬಾತ ಸಾವನ್ನಪ್ಪಿದ್ದನು. ಚಿರತೆ ಹೊತ್ತೊಯ್ದು ಯುವಕ ಪ್ರವೀಣ್ ಕುತ್ತಿಗೆ ಭಾಗವನ್ನೇ ತಿಂದಿತ್ತು ಎನ್ನಲಾಗಿದೆ.
ಈ ಎಲ್ಲ ಕಾರಣದಿಂದಾಗಿ ಚಿರತೆ ಸೆರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆಯನ್ನು ಹೋಗುವುದನ್ನು ನಿಷೇಧಿಸಲಾಗಿದೆ.
SHOCKING: ರಾಜ್ಯದಲ್ಲಿ ಹುಟ್ಟಿದ ಒಂದೇ ನಿಮಿಷಕ್ಕೆ ಹಸುಗೂಸು ಸಾವು: ಸಾವಿನ ಹಿಂದೆ ನೂರಾರು ಅನುಮಾನ
SHOCKING: ಹಣಕ್ಕಾಗಿ ದೊಡ್ಡಪ್ಪ, ದೊಡ್ಡಮ್ಮನಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ಕೊಂಡ ಪಾಪಿ ವೈದ್ಯ








