ಯಾದಗಿರಿ: ಮರಕ್ಕೆ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಯಾದಗಿರಿಯ ವಡಗೇರ ಸರ್ಕಾರಿ ಪ್ರೌಢಶಾಲೆಯ ಹಿಂಭಾಗದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ವಡಗೇರ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಡಗೇರ ನಿವಾಸಿ 9ನೇ ತರಗತಿ ವಿದ್ಯಾರ್ಥಿ ಪವನ್(13) ಆತ್ಮಹತ್ಯೆ ಮಾಡಿಕೊಂಡಾತನಾಗಿದ್ದಾನೆ.
ಶಾಲೆಯ ಸಮಯದಲ್ಲೇ ಪವನ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಪವನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ








