ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಇಂತಹ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡಿನ ಬೆನ್ನಲ್ಲೇ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರ್ಧಾರ ಪ್ರಕಟಿಸಿದ್ದಾರೆ.
ಬೆಂಗಳೂರು ನಿನ್ನೆ ತಮಿಳುನಾಡಿನಲ್ಲಿ ಅಧಿವೇಶನ ಉದ್ದೇಶಿಸಿ ಮಾತನಾಡೋದಕ್ಕೆ ಅಲ್ಲಿನ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡೋದಕ್ಕೆ ನಿರಾಕರಿಸಿರುವುದಾಗಿ ತಿಳಿದು ಬಂದಿದೆ.
ಗರ್ವರನ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಸಂಜೆ 5.45ಕ್ಕೆ ರಾಜಭವನಕ್ಕೆ ಕಾಂಗ್ರೆಸ್ ನಿಯೋದ ತೆರಳಿ ಮನವೊಲಿಸೋದಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದಲ್ಲಿ ಉನ್ನತಮಟ್ಟದ ನಿಯೋಗ ತೆರಳೋದಕ್ಕೆ ನಿರ್ಧರಿಸಿದೆ.
ಅಂದಹಾಗೇ ನಾಳೆಯಿಂದ ವಿಶೇಷ ಜಂಟಿ ಅಧಿವೇಶನ ನಡೆಯುತ್ತಿದೆ. ಜನವರಿ.31ರವರೆಗೆ ನಡೆಯಲಿರುವಂತ ಜಂಟಿ ಅಧಿವೇಶನದಲ್ಲಿ ನರೇಗಾ ಹೆಸರು ಬದಲಾವಣೆಯ ಬಗ್ಗೆ ವಿಶೇಷವಾದಂತ ಚರ್ಚೆ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆಯ ರಾಜ್ಯಪಾಲರ ಜಂಟಿ ಅಧಿವೇಶನ ಉದ್ದೇಶಿಸಿ ಮಾಡುವಂತ ಭಾಷಣವು ಕೇಂದ್ರ ಸರ್ಕಾರದ ವಿರುದ್ಧದ ಭಾಷಣ ಎನ್ನಲಾಗಿದೆ. ಹೀಗಾಗಿಯೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಳೆಯ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡೋದಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ.
BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಗಾಂಜಾ ನಿಷೇಧಕ್ಕೆ ಪ್ರತಿಭಟಿಸಿದ ಹಾಲಪ್ಪ, ಓಸಿ, ಮಟ್ಕಾ ನಿಲ್ಲಿಸಿ ಎಂದಿಲ್ಲವೇಕೆ?: ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನೆ








