ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭಗೊಳ್ಳಲಿದೆ. ಸಂಪ್ರದಾಯದಂತೆ ವಿಧಾನಮಂಡಲದ ಜಂಟಿ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೇ ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಹೆಗ್ಲೋಟ್ ನಿರಾಕರಿಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇಂದು ಈ ವಿಚಾರವಾಗಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆರ್ಟಿಕಲ್ 161, 163ರ ಪ್ರಕಾರ ಭಾಷಣ ಓದಬೇಕು. ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಉಲ್ಲೇಖಿಸಿದ್ದೇವೆ ಎಂದರು.
ಕೋರ್ಟ್ ಗೆ ಹೋಗಿ ಬರ ಪರಿಹಾರ, ನೆರೆ ಪರಿಹಾರ ಪಡೆದಿದ್ದೇವೆ. ಈ ವಿಚಾರ ಭಾಷಣದಲ್ಲಿ ಉಲ್ಲೇಖಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೇ ಪ್ಯಾರಾಗಳನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ನಡುವೆ ಸಂಬಂಧದ ಬಗ್ಗೆ ಅದರಲ್ಲಿ ಉಲ್ಲೇಖವಿದೆ ಎಂದರು.
ಮನ್ ರೇಗಾ ಯೋಜನೆ ಮರುಸ್ಥಾಪನೆ ಬಗ್ಗೆ ಭಾಷಣದಲ್ಲಿ ಉಲ್ಲೇಖವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಕೆಲಸ ಕಿತ್ತುಕೊಂಡ ಬಗ್ಗೆ ಉಲ್ಲೇಖವಿದೆ. ಕೇಂದ್ರದ ವಿರುದ್ಧದ ವಿಚಾರ ಕೈಬಿಡುವಂತೆ ರಾಜ್ಯಪಾಲರಿಂದ ಸಲಹೆ ಮಾಡಲಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ನೀಡದಿರುವುದು. ರಾಜ್ಯಪಾಲರ ಸಲಹೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸುತ್ತೇವೆ. ಚರ್ಚ ನಡೆಸಿ ಮತ್ತೆ ತಿಳಿಸುವುದಾಗಿ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೇವೆ ಎಂದರು.
ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್
BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ








