ಬೆಂಗಳೂರು: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಾಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಅರ್ಜಿಯ ಆದೇಶವನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ದೂರವಾಣಿ ಕರೆ ಮಾಡಿ ಬ್ಯಾನರ್ ತೆರವು ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ತನ್ನ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆ ಪ್ರಕಟಿಸಲಿದೆ ಎಂಬುದಾಗಿ ತಿಳಿದು ಬಂದಿದೆ.
ವಿಧಾನಮಂಡಲದ ಅಧಿವೇಶನ ಭಾಷಣ: ರಾಜ್ಯಪಾಲರ ಭೇಟಿ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು ಗೊತ್ತಾ?
BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ








