ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೆಲ್ಲೂರಿನಿಂದ ಹೈದರಾಬಾದ್‌ಗೆ ಹೋಗುತ್ತಿದ್ದ ಖಾಸಗಿ ಬಸ್ ಸಿರೆಲ್ಲಮೆಟ್ಟ ಬಳಿ ನಿಯಂತ್ರಣ ಕಳೆದುಕೊಂಡು ಟೈರ್ ಸ್ಪೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನವಾಗಿದ್ದಾರೆ.
ನೆಲ್ಲೂರಿನಿಂದ ಹೈದರಾಬಾದ್‌ಗೆ ಹೋಗುತ್ತಿದ್ದ ARBCVR ಖಾಸಗಿ ಟ್ರಾವೆಲ್ಸ್ ಬಸ್‌ನಲ್ಲಿ 36 ಪ್ರಯಾಣಿಕರಿದ್ದರು.. ಬಸ್ ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಇದರಿಂದಾಗಿ, ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಸ್, ಎದುರಿಗೆ ಬರುತ್ತಿದ್ದ ಕಂಟೇನರ್ ಲಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.. ಈ ಅಪಘಾತದಲ್ಲಿ, ಬಸ್ ಚಾಲಕ, ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅದೇ ಸಮಯದಲ್ಲಿ, ಹಾದುಹೋಗುತ್ತಿದ್ದ DCM ಚಾಲಕನೊಬ್ಬ ಬಸ್‌ನ ಕಿಟಕಿಗಳನ್ನು ಒಡೆದಿದ್ದು, ಪ್ರಯಾಣಿಕರು ಜೀವಂತವಾಗಿ ಪಾರಾಗಿದ್ದಾರೆ. ಬೆಂಕಿ ವೇಗವಾಗಿ ಹರಡಿತು ಮತ್ತು ಲಾರಿ ಕೂಡ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕ್ರಮಗಳನ್ನು ಕೈಗೊಂಡರು. ಕಿಟಕಿಗಳಿಂದ ಹಾರಿ ಹತ್ತು ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿದ್ದರು. ಅವರನ್ನು ನಂದ್ಯಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.








