ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ್ದಾರೆ.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ. ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ.
ಭಾಷಣ ಮಾಡದೆ ಹೊರಟ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದ್ದಾರೆ.
https://twitter.com/ANI/status/2014210683399979431?s=20








