ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪತ್ನಿ ಜೊತೆಗೆ ಕಿರಿಕ್ ಮಾಡಿಕೊಂಡ ಪತಿಯೊಬ್ಬ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಕಾಮಗೆರೆಯಲ್ಲಿ ಪತ್ನಿ ಜೊತೆಗೆ ಕಿರಿಕ್ ಮಾಡಿಕೊಂಡ ಪತಿ ಲೋಕೇಶ್ ಕುಡಿದ ಮತ್ತಿನಲ್ಲಿ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ.
ಪತ್ನಿ ರಂಜಿತಾ ಜೊತೆಗೆ ಜಗಳವಾಡಿ ಪತಿ ಲೋಕೇಶ್ ಕತ್ತು ಕೊಯ್ದುಕೊಂಡಿದ್ದಾನೆ. ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಕ್ತಸ್ರಾವವಾಗಿ ಒದ್ದಾಡುತ್ತಿದ್ದವನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆದು ಮನೆಗೆ ಲೋಕೇಶ್ ವಾಪಾಸಾಗಿದ್ದಾನೆ.








