ಹಾಸನ: ಜಿಲ್ಲೆಯ ಕಚೇರಿಯೊಂದರಲ್ಲಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಹಾಸನದ ಬೇಲೂರಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರಿನ ತಾಲ್ಲೂಕು ಕಚೇರಿಯಲ್ಲೇ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಬೇಕಂತಲೇ ಕೆಲಸದ ಒತ್ತಡ ಹೇರುತ್ತಿದ್ದಾರೆಂಬ ಆರೋಪದಡಿ ಶಿರಸ್ತೇದಾರ್ ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕಚೇರಿ ಮುಂಭಾಗದಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಆದರೇ ಬೇಲೂರು ತಹಶೀಲ್ದಾರ್ ಶ್ರೀಧರ್ ಮಾತ್ರ ಶಿರಸ್ತೇದಾರ್ ತನ್ವೀರ್ ಅಹ್ಮದ್ ಸುಳ್ಳು ಆರೋಪ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಅವರ ವಿರುದ್ಧವೇ ದೂರು ನೀಡಲು ತಹಶೀಲ್ದಾರ್ ನಿರ್ಧರಿಸಿದ್ದಾರೆ.
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ








