ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಅಂಗಡಿಯೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಗುಜರಿ ಅಂಗಡಿಯಲ್ಲಿದ್ದಂತ ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದಾವೆ.
ಗುಜರಿ ಅಂಗಡಿಗೆ ತಗುಲಿದ ಬೆಂಕಿ ಅಕ್ಕ ಪಕ್ಕದ ಮನೆಗೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಹೆಂಗಾರು ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ
ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ದೇಶಾದ್ಯಂತ ‘ರೋಡ್ ಶೋ’








