ಬೆಂಗಳೂರು: ರಾಜ್ಯದಲ್ಲಿನ ಸಾರಿಗೆ ಬಸ್ಸುಗಳ ನಿಲ್ದಾಣದಲ್ಲಿರುವಂತ ಶೌಚಾಲಯಗಳು ಗಬ್ಬೆದ್ದು ನಾರುತ್ತಿರುತ್ತವೆ ಎಂಬುದು ಹಲವರ ಆರೋಪವಾಗಿತ್ತು. ಇದನ್ನು ಉಪ ಲೋಕಾಯುಕ್ತರು ಭೇಟಿ ನೀಡಿದಂತ ಸಂದರ್ಭದಲ್ಲಿ ಗಮನಿಸಿ, ಕಟ್ಟು ನಿಟ್ಟಿನ ಸೂಚನೆ ನೀಡಿದ್ದರು. ಆದರೂ ಕೆಲವು ಸಾರಿಗೆ ಬಸ್ ನಿಲ್ದಾಣಗಳಲ್ಲಿ ಶುಚಿತ್ವವನ್ನು ಕಾಪಾಡಿರಲಿಲ್ಲ. ಹೀಗಾಗಿ ಶೌಚಾಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ನಿಯಮ ಉಲ್ಲಂಘಿಸಿದ್ರೆ ಅಂತಹ ವಿಭಾಗೀಯ ನಿಯಂತ್ರಣಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯದ ಸಾರಿಗೆ ಸಂಸ್ಥೆಯ 4 ನಿಗಮಗಳಿಂದ ಪ್ರತಿನಿತ್ಯ ಅಂದಾಜು 1 ಕೋಟಿ 15 ಲಕ್ಷ ಪ್ರಯಾಣಿಕರಿಗೆ ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿರುವ ಸೇವೆಗೆ ದೇಶದಲ್ಲಿಯೇ ಹೆಗ್ಗಳಿಕೆಯನ್ನು ಪಡೆದಿರುತ್ತದೆ. ಆದರೆ, ನಿಗಮಗಳ ವ್ಯಾಪ್ತಿಯಲ್ಲಿರುವ ಅನೇಕ ಬಸ್ ನಿಲ್ದಾಣಗಳಲ್ಲಿ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಇರುವ ಬಗ್ಗೆ ಹಾಗೂ ಅಶುಚಿಯ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿರುತ್ತಾರೆ ಅಲ್ಲದೆ, ಮಾನ್ಯ ಉಪ ಲೋಕಾಯುಕ್ತರು ಸಹ ಈ ಬಗ್ಗೆ ಅನೇಕ ಬಾರಿ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಸ್ವಯಂ ದೂರನ್ನು ದಾಖಲಿಸಿಕೊಂಡು ಮಾಹಿತಿಯನ್ನು ಈ ಕಛೇರಿಗೆ ನೀಡಿರುತ್ತಾರೆ ಎಂದಿದ್ದಾರೆ.
ಆದ್ದರಿಂದ, ಸಾರ್ವಜನಿಕರ ಹಿತೃಷ್ಟಿಯಿಂದ ಹಾಗೂ ಸಂಸ್ಥೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಯಾಯ ನಿಗಮಗಳ ವ್ಯಾಪ್ತಿಗೊಳಪಡುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮಾಸಕ್ಕೆ ಒಮ್ಮೆ ಖುದ್ದಾಗಿ ನಿಲ್ದಾಣಗಳಿಗೆ ಭೇಟಿ ನೀಡಿ ನಿಲ್ದಾಣಗಳನ್ನು ಹಾಗೂ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿರುವ ಬಗ್ಗೆ ವರದಿಯನ್ನು ತಮಗೆ ಸಲ್ಲಿಸುವಂತೆ ಸೂಕ್ತ ಆದೇಶವನ್ನು ಹೊರಡಿಸಲು ಸೂಚಿಸಿದೆ ಹಾಗೂ ಈ ಆದೇಶವನ್ನು _ ಉಲ್ಲಂಘಿಸಿದಲ್ಲಿ ಸದರಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು

ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಜ.24ರಿಂದ ಬೆಂಗಳೂರು-ಅಲಿಪುರ್ ದ್ವಾರ್ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ








