ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಡಿಸೆಂಬರ್ 31, 2027ರವರೆಗೆ ಎಲ್ಲಾ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸೇರಿದಂತೆ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.
ಇಂದಿನ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ ನಿಯಮ ಅನ್ವಯವಾಗಲಿದೆ. ಸಾಮಾನ್ಯ ವರ್ಗಕ್ಕೆ 35 ರಿಂದ 40 ವರ್ಷ, ಎಸ್ಸಿ-ಎಸ್ಟಿಗಳಿಗೆ 38ರಿಂದ 43 ವರ್ಷಕ್ಕೆ ವಯೋಮಿತಿ ಸಡಿಲಿಕೆಯ ನಿರ್ಧಾರ ಕೈಗೊಳ್ಳಲಾಗಿದೆ.
ಇದಲ್ಲದೇ 22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.
ರಾಜ್ಯದ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರಿನ HSR ಬಡಾವಣೆಯಲ್ಲಿನ KEONICS ಸೌಲಭ್ಯ “CATS (Center for Applied Al for Tech Solutions)” ಹೆಸರಿಸಲಾದ AI ಉತ್ಕೃಷ್ಟತಾ ಕೇಂದ್ರ (AI-CoE) ಅನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ NASSCOM ಸಹಯೋಗದೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.
ಪೌಷ್ಠಿಕ ಆಹಾರ ಯೋಜನೆಯಡಿ ರಾಜ್ಯದ 08 ಜಿಲ್ಲೆಗಳಲ್ಲಿ ಒಟ್ಟು 50046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ఒಟ್ಟು ರೂ 145.03 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಕಿಟ್ ಅಂದಾಜು ರೂ.2415.38/- ರಂತೆ) ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.
ಕೊಪ್ಪಳ ಜಿಲ್ಲೆಯ ತಳಕಲ್ನಲ್ಲಿ GTTC-MSDC (ಬಹು ಕೌಶಲ್ಯಾಭಿವೃದ್ಧಿ ಕೇಂದ್ರ)ದ ಎರಡನೇ ಹಂತದ ನಿರ್ಮಾಣ ಕಾಮಗಾರಿ ಗಳನ್ನು KKRDB ಅನುದಾನದಿಂದ ರೂ.66.75 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವುದು.
ಅಂತಿಮವಾಗಿ ಅರೆ-ಅಲೆಮಾರಿ ಸಮುದಾಯದ ಜನರಿಗೆ 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಒಳಗೊಂಡಂತೆ ಸೌಕರ್ಯಗಳನ್ನು ರೂ 100.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.
ರಾಜ್ಯ ಕ್ಯಾಬಿನೆಟ್ ಇನ್ ಸೈಟ್ ನಡೆದಿದ್ದೇನು?
ರಾಜ್ಯಪಾಲರ ನಡೆಯ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ. ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳುವಂತೆ ಡಿಮ್ಯಾಂಡ್ ಮಾಡಲಾಗಿದೆ. ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಸುಲಭವಾಗಿ ವಿಷಯವನ್ನ ನಾವು ಬಿಡಬಾರದು ಎಂಬುದಾಗಿ ಹೇಳಲಾಗಿದೆ. ರಾಜ್ಯಪಾಲರೇ ಸಂಘರ್ಷ ಶುರು ಮಾಡಿದ್ದಾರೆ. ಅವರಿಂದಲೇ ಕಾರ್ಯಲೋಪಗಳಾಗಿವೆ. ಹೀಗಾಗಿ ರಾಜ್ಯಪಾಲರ ವಿರುದ್ದ ಗೋ ಬ್ಯಾಕ್ ನಿರ್ಣಯ? ಕಾನೂನು ತಜ್ಙರ ಸಲಹೆ ಪಡೆದು ಮುಂದುವರೆಯಲು ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ರಾಷ್ಟ್ರ ಪತಿಗೆ ಪತ್ರಬರೆಯುವ ಬಗ್ಗೆ ಸಿಎಂ ವಿವೇಚನೆಗೆ ಬಿಟ್ಟ ಕ್ಯಾಬಿನೆಟ್.
20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ
ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ








