ಬೆಂಗಳೂರು: ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಸಿಹಿಸುದ್ದಿ ನೀಡಲಾಗಿದೆ. ಅದೇನು ಅಂದ್ರೆ ಇನ್ಮುಂದೆ ಮನೆ ನಿರ್ಮಾಣಕ್ಕೆ ನೆರವು ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲಿ 100 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇಂದಿನ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ ನಿಯಮ ಅನ್ವಯವಾಗಲಿದೆ. ಸಾಮಾನ್ಯ ವರ್ಗಕ್ಕೆ 35 ರಿಂದ 40 ವರ್ಷ, ಎಸ್ಸಿ-ಎಸ್ಟಿಗಳಿಗೆ 38ರಿಂದ 43 ವರ್ಷಕ್ಕೆ ವಯೋಮಿತಿ ಸಡಿಲಿಕೆಯ ನಿರ್ಧಾರ ಕೈಗೊಳ್ಳಲಾಗಿದೆ.
ಇದಲ್ಲದೇ 22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.
ರಾಜ್ಯದ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
BREAKING: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಗಳಿಸಿದ ಆರೋಪ: ತುಂಗಾ ಮೇಲ್ದಂಡೆ ಯೋಜನೆ ಸಿಇಗೆ 4 ವರ್ಷ ಜೈಲು








