Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

23/01/2026 6:07 AM

ಗಣರಾಜ್ಯೋತ್ಸವ – 2026 : `ಸಿರಿಧಾನ್ಯದಿಂದ ಮೈಕ್ರೋಚಿಪ್’ವರೆಗೆ ಇಲ್ಲಿದೆ `ಕರ್ನಾಟಕದ ಸ್ತಬ್ಧಚಿತ್ರ’ದ ಕುರಿತು ಮಾಹಿತಿ

23/01/2026 6:00 AM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

23/01/2026 5:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಣರಾಜ್ಯೋತ್ಸವ – 2026 : `ಸಿರಿಧಾನ್ಯದಿಂದ ಮೈಕ್ರೋಚಿಪ್’ವರೆಗೆ ಇಲ್ಲಿದೆ `ಕರ್ನಾಟಕದ ಸ್ತಬ್ಧಚಿತ್ರ’ದ ಕುರಿತು ಮಾಹಿತಿ
KARNATAKA

ಗಣರಾಜ್ಯೋತ್ಸವ – 2026 : `ಸಿರಿಧಾನ್ಯದಿಂದ ಮೈಕ್ರೋಚಿಪ್’ವರೆಗೆ ಇಲ್ಲಿದೆ `ಕರ್ನಾಟಕದ ಸ್ತಬ್ಧಚಿತ್ರ’ದ ಕುರಿತು ಮಾಹಿತಿ

By kannadanewsnow5723/01/2026 6:00 AM

ಭಾರತವನ್ನು ಆತ್ಮನಿರ್ಭರ ರಾಷ್ಟçನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವAತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟö್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟಾçನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.

ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್ ಅಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ (2024 ಮತ್ತು 2026ರಲ್ಲಿ) ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಹೇಳಿದ್ದಾರೆ.

2026ರ ಜನವರಿ 26ರಂದು ನಡೆಯುವ ದೆಹಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ, ಕರ್ನಾಟಕ ಪುಷ್ಪ ವೈಭವ, ಹಲಗಲಿ ಬೇಡರು, ‘ಸಿರಿಧಾನ್ಯದಿಂದ ಮೈಕ್ರೋಚಿಪ್’ ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು.
ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್ ಗಳನ್ನು ಉತ್ಪಾದಿಸುವ ಸೂಕ್ಷö್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ.

ವಿಷಯ ಆಯ್ಕೆಯ ಬಳಿಕ ಅದನ್ನು ವಿವಿಧ ಸ್ತರಗಳನ್ನು ನಿರೂಪಿಸಬೇಕಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದವು. ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ಹೇಳಿದರು.

*ಸ್ತಬ್ಧಚಿತ್ರದಲ್ಲಿ ಏನಿರಲಿದೆ:*

ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ.

ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್ ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊAದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ.

ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿAದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್ ಗಳ ಮಧ್ಯೆ ರೋಬೋಟ್ ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿAದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ.

*ತೀವ್ರ ಪೈಪೋಟಿ:*

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15 ಕ್ಕೆ ಇಳಿಸಿದೆ.
2024ರಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಕಲ್ಪಿಸಲು ಆವರ್ತನ ಮಾದರಿಯಲ್ಲಿ ಒಂದು ವರ್ಷ ಪಥಸಂಚಲನ ಮತ್ತು ಅದರ ಮುಂದಿನ ವರ್ಷ ಭಾರತ ಪರ್ವದಲ್ಲಿ ಪ್ರದರ್ಶಿಸುವಂತೆ ಎಲ್ಲಾ ರಾಜ್ಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಹೀಗಾಗಿ, ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

*ಪ್ರಶಸ್ತಿಗಳ ಸರಮಾಲೆ:*

2022ರಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲು ಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೊಯ್ಸಳ ವಾಸ್ತುಶಿಲ್ಪ ಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕ ದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ.

Here is the Complete List of Stills Republic Day – 2026: From Cereal to Microchip
Share. Facebook Twitter LinkedIn WhatsApp Email

Related Posts

ALERT : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

23/01/2026 6:07 AM2 Mins Read

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

23/01/2026 5:52 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ

23/01/2026 5:30 AM1 Min Read
Recent News

ALERT : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

23/01/2026 6:07 AM

ಗಣರಾಜ್ಯೋತ್ಸವ – 2026 : `ಸಿರಿಧಾನ್ಯದಿಂದ ಮೈಕ್ರೋಚಿಪ್’ವರೆಗೆ ಇಲ್ಲಿದೆ `ಕರ್ನಾಟಕದ ಸ್ತಬ್ಧಚಿತ್ರ’ದ ಕುರಿತು ಮಾಹಿತಿ

23/01/2026 6:00 AM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

23/01/2026 5:52 AM

BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ

23/01/2026 5:30 AM
State News
KARNATAKA

ALERT : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

By kannadanewsnow5723/01/2026 6:07 AM KARNATAKA 2 Mins Read

ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳು ಆನ್‌ಲೈನ್ ತರಗತಿಗಳು, ಯೋಜನೆಗಳು ಅಥವಾ ಮನರಂಜನೆಗಾಗಿ ತಮ್ಮ ಫೋನ್‌ಗಳಲ್ಲಿ ಗಂಟೆಗಟ್ಟಲೆ ಕಳೆಯುತ್ತಾರೆ. ಆದರೆ ಈ…

ಗಣರಾಜ್ಯೋತ್ಸವ – 2026 : `ಸಿರಿಧಾನ್ಯದಿಂದ ಮೈಕ್ರೋಚಿಪ್’ವರೆಗೆ ಇಲ್ಲಿದೆ `ಕರ್ನಾಟಕದ ಸ್ತಬ್ಧಚಿತ್ರ’ದ ಕುರಿತು ಮಾಹಿತಿ

23/01/2026 6:00 AM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

23/01/2026 5:52 AM

BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ

23/01/2026 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.