ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ ಮಾಡಿ, ಅವಾಚ್ಯ ಶಬ್ದಳಿಂದ ಬೈದು, ಧಮ್ಕಿ ಹಾಕಿದಂತ ಕೈ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿಯ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ.ರೆಹಮಾನ್ ಖಾನ್ ಅವರು ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕೆಪಿಸಿಸಿ ಕಳುಹಿಸಿದ ಪತ್ರದ ಅನುಸಾರ ದಿನಾಂಕ 23-01-2026 ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಸಭೆಯಲ್ಲಿ ರಾಜೀವ್ ಗೌಡ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ಪಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಶ್ರೀ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತ್ತು ಮಾಡಲಾಗಿದೆ ಎಂದಿದ್ದಾರೆ.
ಅಂದಹಾಗೇ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಬ್ಯಾನರ್ ತೆರವುಗೊಳಿಸಿದ ಕಾರಣಕ್ಕಾಗಿ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅಲ್ಲದೇ ಧಮ್ಕಿ ಹಾಕಿದ್ದರು. ಈ ಎಲ್ಲಾ ಆಡಿಯೋ ವೈರಲ್ ಆಗಿತ್ತು. ಅವರ ವಿರುದ್ಧ ಪೌರಾಯುಕ್ತೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಹೈಕೋರ್ಟ್ ಗೆ ಎಫ್ಐಆರ್ ರದ್ದುಕೋರಿ ರಾಜೀವ್ ಗೌಡ ಸಲ್ಲಿಸಿದ್ದಂತ ಅರ್ಜಿಯನ್ನೇ ವಾಜಾಗೊಳಿಸಲಾಗಿತ್ತು. ಹೀಗಾಗಿ ಅವರಿಗೆ ಬಂಧನದ ಭೀತಿ ಎದುರಾಗಿ ತಲೆ ಮರೆಸಿಕೊಂಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








