ಬೆಂಗಳೂರು: ಕರ್ನಾಟಕದ ರಾಜ್ಯಪಾಲರ ನಿವಾಸವಾಗಿರುವಂತ ಲೋಕಭವನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು. ಈ ಬಗ್ಗೆ ಪೊಲೀಸರು ತಪಾಸಣೆ ನಡೆಸಿದಾಗ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ದುಷ್ಕರ್ಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದು, ಕೇಸ್ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ.
ಜನವರಿ.14ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವಂತ ರಾಜ್ಯಪಾಲರ ನಿವಾಸವಾದಂತ ಲೋಕಭವನಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದ ದಳದೊಂದಿಗೆ ತೆರಳಿ ತಪಾಸಣೆ ನಡೆಸಿದಾಗ ಅದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿತ್ತು.
gaina_ramesh@outlook.com ಎನ್ನುವಂತ ಇ-ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆಯನ್ನು ಲೋಕಭವನದ ಸರ್ಕಾರಿ ಅಧಿಕೃತ ಮೇಲ್ ಐಡಿಗೆ ಕಳುಹಿಸಲಾಗಿತ್ತು. ಈ ಸಂಬಂಧ ಲೋಕಭವನದಿಂದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








