ಮಂಡ್ಯ: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಮಾಡಿರುವಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ನಾಗಮಂಗಲ ತಾಲ್ಲೂಕು ಕಚೇರಿಗೆ ಇಡಿ ಅಧಿಕಾರಿಗಳು ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ 320 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿದಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕುರಿತಂತೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.
ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆಯಲ್ಲಿ ಸರ್ಕಾರಿ ಭೂಮಿ ನಕಲಿ ದಾಖಲೆ ಸೃಷ್ಠಿಸಿ ಮಂಜೂರು ಮಾಡಿದ್ದು ತಿಳಿದು ಬಂದಿತ್ತು. ಅಂದೇ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಡಿವೈಎಸ್ಪಿ ಚಲುವರಾಜು ನೇತೃತ್ವದಲ್ಲಿ ಜಿಲ್ಲಾಡಳಿತ ತನಿಖೆಗೂ ಆದೇಶಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹಂತದಲ್ಲಿ ಇರುವಾಗಲೇ ಇಡಿ ಅಧಿಕಾರಿಗಳು ಇಂದು ಮಂಡ್ಯದ ನಾಗಮಂಗಲ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರ ಸಮ್ಮುಖದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಂಬಂಧ ಪಟ್ಟಂತ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








