ಬೆಂಗಳೂರು : ಬೆಂಗಳೂರಿನ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶಕ್ತಿಸೌಧದ ಮುಂದೆ ಡಾ.ನಾಗೇಂದ್ರ ಶಿರೂರು ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಡಾ.ನಾಗೇಂದ್ರ ಶಿರೂರುಗೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಗೆ ಸೋಲದೇವನಹಳ್ಳಿಯಲ್ಲಿ ಸಮಸ್ಯೆ ಆಗುತ್ತಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಡಾ.ನಾಗೇಂದ್ರ ಶಿರೂರುಗೆ ವಿಧಾನಸೌಧದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.








