ಬೆಂಗಳೂರು : ನಟ ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಸಿನಿಮಾಗೆ ಸಿಎಂ ಸಿದ್ದರಾಮಯ್ಯ ವಿಶ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಲ್ಯಾಂಡ್ ಲಾರ್ಡ್” ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
ಈ ಚಿತ್ರದ ಮೂಲಕ ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಿಜಕ್ಕೂ ಇದೊಂದು ದಿಟ್ಟ ಪ್ರಯತ್ನ, ಇದಕ್ಕಾಗಿ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು.
ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ಶತದಿನೋತ್ಸವವನ್ನು ಪೂರೈಸಲಿ, ಇಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಈ ಸಿನಿಮಾ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. ಎಲ್ಲರೂ ನೋಡಲೇಬೇಕಾದ ಚಿತ್ರವಿದು. ನಾನೂ ಖಂಡಿತವಾಗಿ ಚಿತ್ರಮಂದಿರಕ್ಕೆ ತೆರಳಿ ಈ ಸಿನಿಮಾ ವೀಕ್ಷಿಸುತ್ತೇನೆ, ನೀವೂ ನೋಡಿ.
"ಲ್ಯಾಂಡ್ ಲಾರ್ಡ್" ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
ಈ ಚಿತ್ರದ ಮೂಲಕ ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು… pic.twitter.com/fOTh9MHJcF
— Siddaramaiah (@siddaramaiah) January 24, 2026








