ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಲಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ಪರೀಕ್ಷೆಗಳು ನಡೆಯಲಿವೆ. ಜನವರಿ.27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪ್ರಥಮ ಭಾಷೆ ವಿಷಯಗಳಾಗಿರುವಂತ ಕನ್ನಡ, ಹಿಂದಿ, ತೆಲುಗು, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಎನ್ ಸಿ ಇ ಆರ್ ಟಿ ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯ ಪರೀಕ್ಷೆ ನಡೆಯಲಿದೆ ಎಂದಿದೆ.
ಇನ್ನೂ ಜನವರಿ 28ರಂದು ಗಣಿತ ವಿಷಯದ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಜನವರಿ.29ರಂದು ದ್ವಿತೀಯ ಭಾಷೆಯ ವಿಷಯವಾಗಿರುವಂತ ಕನ್ನಡ, ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಜನವರಿ.30ರಂದು ತೃತೀಯ ಭಾಷೆಯ ವಿಷಯವಾದಂತ ಹಿಂದಿ, ಎನ್ ಸಿ ಆರ್ ಟಿ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಭಾಷೆಯ ಪರೀಕ್ಷೆಗಳು ನಡೆಯಲಿವೆ.
ಜನವರಿ.31ರಂದು ವಿಜ್ಞಾನ ವಿಷಯದ ಪರೀಕ್ಷೆ, ಫೆಬ್ರವರಿ.2, 2026ರಂದು ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ. ಈ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಸಂಬಂಧಿಸಿದ ವಿಷಯ ಶಿಕ್ಷಕರಿಂದ ಪ್ರಶ್ನೆ ಪತ್ರಿಕೆ ತಯಾರಿಸಿಕೊಂಡು, ಪರೀಕ್ಷೆಯನ್ನು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ.
CRIME NEWS: ಹಣಕಾಸಿನ ವಿಚಾರಕ್ಕೆ ‘ಅಣ್ಣ-ತಮ್ಮ’ನನ್ನೇ ಕೊಂದ ಸ್ನೇಹಿತ; ಹೊನ್ನಾವರ ಪೊಲೀಸರಿಂದ ಮೂವರು ಅರೆಸ್ಟ್








