ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ ಕಾಯ್ದಿರಿಸಿದ್ದರು.
ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಆರೋಪಿ ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ವಾದಿಸಿದ್ದರು. ದೂರುದಾರೆ ಪರ ಪಿಪಿ ಸುಮಶಾಂತಾ ಮೇರಿ ವಾದವನ್ನು ಮಂಡಿಸಿದ್ದರು. ಈ ವಾದ-ಪ್ರತಿವಾದವನ್ನು ಆಲಿಸಿರುವಂತ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್ ನೀಡಿದ್ದಾರೆ.
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








