ಮಂಡ್ಯ : ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೂಳಗೆರೆ ಏತ ನೀರಾವರಿ ಯೋಜನೆಯನ್ನು ಪುನಃ ಚಾಲನೆ ನೀಡಿದ್ದು, ಇನ್ನು ಮುಂದೆ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.
ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಕೆರೆಗೆ ರೈತರು, ಸಾರ್ವಜನಿಕರು ಹಾಗೂ ಅಧಿಕಾರಿಗಳ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿ ಅವರು ಮಾತನಾಡಿದರು.
ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿ ಹರಿಯುವ ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಮನುಷ್ಯನ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದರು.
ಸೋಮನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 18 ಕೆರೆಗಳಿಗೆ ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಮೂಲಕ ಈ ಭಾಗದಲ್ಲಿ ತಲೆದೊರುತ್ತಿರುವ ಜಲಕ್ಷಾಮಕ್ಕೆ ನಾಲ್ಕೆದು ತಿಂಗಳಲ್ಲಿ ಶಾಶ್ವತವಾಗಿ ಮುಕ್ತಿ ನೀಡಲಾಗುವುದು ಎಂದರು.
ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೂಳಗೆರೆ ಏತ ನೀರಾವರಿ ಯೋಜನೆಯನ್ನು 3 ಕೋಟಿ ರೂ ವೆಚ್ಚದಲ್ಲಿ ಪಂಪು, ಮೋಟಾರ್ ಗಳನ್ನು ಅಳವಡಿಸುವ ಮೂಲಕ ಪುನಃ ಆರಂಭಿಸಿದ್ದು, ಇನ್ನು ಮುಂದೆ ಯಾವುದೇ ಆತಂಕವಿಲ್ಲದೆ ರೈತರು ಬೇಸಾಯ ಮಾಡಬಹುದು. ಈ ಯೋಜನೆಯಿಂದ 200 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ನೀರಿನ ಮೂಲಗಳಾದ ಕೆರೆ, ಕಟ್ಟೆ, ಬಾವಿಗಳನ್ನು ಸಂರಕ್ಷಿಸಿ ನೀರು ಸಂಗ್ರಹವಾಗುವಂತೆ ಮಾಡಬೇಕು. ಕೆರೆ ನೀರು ಕಲುಷಿತವಾಗುವುದನ್ನು ತಪ್ಪಿಸಬೇಕು. ಕೆರೆಗೆ ಶುದ್ಧ ನೀರು ಹರಿಯುವಂತೆ ಮಾಡಬೇಕು. ಕೆರೆಗಳು ಒತ್ತುವರಿಯಾಗದಂತೆ ಎಚ್ಚರಿಕೆ ವಹಿಸಬೇಕು. ಕೆರೆಯಲ್ಲಿ ನೀರು ತುಂಬಿಸಿದರೆ ಅಂತರ್ಜಲದ ಮಟ್ಟ ಹೆಚ್ಚಾಗಿ ಸುತ್ತಮುತ್ತಲ ಕೊಳವೆ ಬಾವಿಗಳಲ್ಲಿ ನೀರು ದೊರೆಯುವಂತಾಗುತ್ತದೆ ಎಂದರು.
ಇದೇ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಕಾಂಗ್ರೆಸ್ ಮುಖಂಡ ಜಯರಾಂ, ಗ್ರಾಪಂ ಅಧ್ಯಕ್ಷ ಕೆಂಪರಾಜು, ಸದಸ್ಯ ಮಾದೇಶ್, ಸಿದ್ದರಾಜು, ಕಾವೇರಿ ನೀರಾವರಿ ನಿಗಮದ ಇಇ ಮೋಹನ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








