ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಜೈಲುಗಳ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕಾರಾಗೃಹ ಡಿಜಿಪಿ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.
ಈ ಕುರಿತಂತೆ ಎಲ್ಲಾ ಜೈಲುಗಳಿಗೆ ಕಾರಾಗೃಹ ಡಿಜಿಪಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗ್ತಿದೆ. ಸಂದರ್ಶನದ ವೇಳೆ ಕೈದಿಗಳಿಗೆ ಖಾಸಗಿ ವ್ಯಾಕ್ತಿಗಳಿಂದ ಆಹಾರ ಪೂರೈಕೆ ಬಗ್ಗೆ ನಿಯಂತ್ರಣ ಹೇರುವಂತೆ ತಿಳಿಸಲಾಗಿದೆ.
ಕೈದಿಗಳಿಗೆ ಖಾಸಗಿ ವ್ಯಕ್ತಿಗಳು ಆಹಾರ ಪೂರೈಸುವಕ್ಕೆ ಕಾರಾಗೃಹ ಡಿಜಿಪಿ ಬ್ರೇಕ್ ಹಾಕಲಾಗಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಪ್ಯಾಕ್ ಮಾಡಿರುವ ಆಹಾರ ನೀಡಲು ಮಾತ್ರವೇ ಅವಕಾಶ ನೀಡಲಾಗಿದೆ. ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿ 2 ಕೆಜಿಯಷ್ಟು ಇರಬೇಕು. ಡ್ರೈಪ್ರೂಟ್ಸ್, ಬೇಕರಿ ತಿನಿಸು ಸೇರಿದಂತೆ 500 ಗ್ರಾಮ್ ಮೀರುವಂತಿಲ್ಲ ಎಂಬುದಾಗಿ ಖಡಕ್ ಸೂಚನೆ ನೀಡಲಾಗಿದೆ.
BREAKING: ಟಿ20 ವಿಶ್ವಕಪ್ ಬಾಯ್ಕಾಟ್ ಮಾಡುವುದಾಗಿ ಪಾಕಿಸ್ತಾನ ಬೆದರಿಕೆ
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








