ಬೆಂಗಳೂರು: ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ.
ಅತ್ಯಂತ ಹಿರಿಯ ಶಾಸಕರಾದ ಬಿ.ಕೆ. ಹರಿಪ್ರಸಾದ ಅವರ ವರ್ತನೆ. ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿರಸುವುದು ಅತ್ಯಂತ ಅವಶ್ಯಕತೆ ಇದೆ. ಈ ಹಿಂದೆ ಹಂಸರಾಜ ಭಾರದ್ವಾಜ್ ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ್ಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ. ರಾಜಭವನ ಕಾಂಗ್ರೆಸ್ ಭವನ ಆಗಿದ್ದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮರೆತರೆ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಎಂಜಿನಿಯರಿಂಗ್ ಸೀಟ್ ಬ್ಲಾಕ್, PSI ನೇಮಕಾತಿ ಡೀಲ್ ಕೇಸ್: EDಯಿಂದ 21 ಕೋಟಿ ಮೌಲ್ಯದ ಆಸ್ತಿ ಜಪ್ತಿ








