ದಾವೂಸ್: ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಾವೋಸ್‌ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರಿಗೆ ಮಾಹಿತಿ ನೀಡಿದೆ ಎಂದಿದ್ದಾರೆ.
ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ–ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು ಎಂದರು.
ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಭಾರತವನ್ನು, ವಿಶೇಷವಾಗಿ ಬೆಂಗಳೂರು ಮುಖಾಂತರ, ಜಗತ್ತು ನೋಡುತ್ತಿರುವುದು ಸ್ಪಷ್ಟವಾಯಿತು ಎಂದು ತಿಳಿಸಿದ್ದಾರೆ.
ನಗರೀಕರಣ, ಸಂಚಾರ ವ್ಯವಸ್ಥೆ, 2 ಮತ್ತು 3 ಟೈರ್ ನಗರಗಳ ಅಭಿವೃದ್ಧಿ ಕುರಿತು ಸಲಹೆಗಳು ಬಂದವು. ಮುಂದಿನ 25 ವರ್ಷಗಳಿಗೆ ತಕ್ಕಂತೆ ರಿಂಗ್ ರೋಡ್, ಬಿಸಿನೆಸ್ ಕಾರಿಡಾರ್ ಯೋಜನೆಗಳನ್ನು ಈಗಿನಿಂದಲೇ ರೂಪಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ: ಬಸವರಾಜ ಬೊಮ್ಮಾಯಿ








