ತುಮಕೂರು : ಹಿಂಬದಿಂದ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ದುರ್ಮರಣ ಹೊಂದಿರುವ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮಂಜುನಾಥ ನಗರ ಬೈಪಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಮಂಜುನಾಥ ನಗರ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಯುವಕ ವಿನಯ್ , ಮೃತಪಟ್ಟ ಸವಾರ ಎಂದು ತಿಳಿದುಬಂದಿದೆ ವಿರೂಪಾಕ್ಷ ಗ್ರಾಮದ ನಿವಾಸಿಯಾಗಿದ್ದ ಎಂದು ತಿಳಿದು ಬಂದಿದ್ದು ಈ ಕುರಿತು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








