ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಇದೀಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾನ್ಸ್ಟೇಬಲ್ ಅನ್ನು ಅರೆಸ್ಟ್ ಮಾಡಲಾಗಿದೆ.
ಆರ್.ಟಿ.ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಯಮುನಾ ನಾಯಕ್‌ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮುನಾ ನಾಯಕ್, ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಪಿಯುಸಿ ವಿದ್ಯಾರ್ಥಿಯೋರ್ವ ಆರೋಪಿಸಿದ್ದಾನೆ. ಈ ಸಂಬಂಧ ನೊಂದ ವಿದ್ಯಾರ್ಥಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಯಮುನಾ ನಾಯಕ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.








