ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ನೆಲಮಂಗಲದ ರೌಡಿಶೀಟರ್ ಆಟೋ ನಾಗನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ರೌಡಿಶೀಟರ್ ಆಟೋ ನಾಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಲಗ್ಗೆರೆ ಮತ್ತು ಹುಲಿಯೂರು ದುರ್ಘಟ್ಟ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಆಟೋ ನಾಗ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








